anna bhagya dbt status: ಅನ್ನಭಾಗ್ಯ ಯೋಜನೆ 2 ತಿಂಗಳ ಆಕ್ಕಿ ಹಣ ಬಿಡುಗಡೆ.! ಈ ರೀತಿ ಸ್ಟೇಟಸ್ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳು ಜಾರಿ ಇವೆ. ಈ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ.! ಈ ಯೋಜನೆಯ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು 5 ಕೆಜಿ ಅಕ್ಕಿಯ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ ಆದರೆ ಕಳೆದ 2 ರಿಂದ 3 ತಿಂಗಳ ಹಣ ಜಮಾ ಆಗಿಲ್ಲ ಅಂತವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಎರಡು ತಿಂಗಳ ಅಕ್ಕಿ ಜಮಾ ಆಗಿದ್ದು ಯಾವ ರೀತಿ ಸ್ಟೇಟಸ್ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಮತ್ತು ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಎಂಬ ಮಾಹಿತಿ ಕೂಡ ತಿಳಿಯೋಣ
4ನೇ ತರಗತಿ ಮತ್ತು 10ನೇ ತರಗತಿ ಪಾಸಾದವರಿಗೆ ಸರಕಾರ ಉದ್ಯೋಗ 22,000/- ವರೆಗೆ ಸಂಬಳ ಬೇಗಾ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆ (anna bhagya dbt status)..?
ಕಾಂಗ್ರೆಸ್ ಪಕ್ಷ ನಮ್ಮ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ 2023 ರಲ್ಲಿ ಜನರಿಗೆ 5 ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿದ್ದು ಈ ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆಯ ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ.! ಈ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು ಆದರೆ ಅಕ್ಕಿಯ ಅಭಾವದಿಂದ 5 ಕೆಜಿ ಅಕ್ಕಿ ಮಾತ್ರ ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತಿದೆ ಆದರೆ ಉಳಿದ ಐದು ಕೆಜಿ ಅಕ್ಕಿ ಹಣವನ್ನು ರಾಜ್ಯ ಸರ್ಕಾರ ಕಳೆದ ಜನವರಿ ತಿಂಗಳವರೆಗೆ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ.!

ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಣವನ್ನು ನೇರವಾಗಿ ರೇಷನ್ ಕಾರ್ಡ್ ನಲ್ಲಿ ಇರುವ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಇಲ್ಲಿವರೆಗೂ ವರ್ಗಾವಣೆ ಮಾಡುತ್ತಾ ಬಂದಿದೆ ಆದರೆ ಕಳೆದ ಎರಡು ಮೂರು ತಿಂಗಳಿಂದ ಈ ಯೋಜನೆ ಅಡಿಯಲ್ಲಿ ಹಣ ಜಮಾ ಆಗುತ್ತಿಲ್ಲ.! ಆದರೆ ಇದೀಗ ರಾಜ್ಯ ಸರ್ಕಾರ ಪೆಂಡಿಂಗ್ ಇರುವಂತ ಎರಡು ತಿಂಗಳ ಹಣವನ್ನು ಬಿಡುಗಡೆ ಮಾಡಿದೆ
ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸು ತಿಂಗಳಿಗೆ 30000 ಸಂಬಳ ಪಡೆಯಿರಿ ಇಲ್ಲಿದೆ ನೋಡಿ ಮಾಹಿತಿ
ಎರಡು ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ (anna bhagya dbt status).?
ಹೌದು ಸ್ನೇಹಿತರೆ ನಮ್ಮ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.! ಅನ್ನಭಾಗ್ಯ ಯೋಜನೆಯ ಎರಡು ತಿಂಗಳ ಅಜ್ಜಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ ಮತ್ತು ಈ ಅಕ್ಕಿ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗಲು ಇನ್ನು ಮಾರ್ಚ್ 31 ರವರೆಗೆ ಕಾಲಾವಕಾಶ ತೆಗೆದುಕೊಳ್ಳುತ್ತದೆ ಎಂದು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ
ಇದೀಗ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿದೆ ಹಾಗಾಗಿ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆ ಸ್ಟೇಟ್ಮೆಂಟ್ ಚೆಕ್ ಮಾಡಿ ಅಥವಾ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿದೆ ಅಥವಾ ಇಲ್ಲ ಎಂಬ ಸ್ಟೇಟಸ್ ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಮತ್ತು ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಎಂಬ ಮಾಹಿತಿ ಕೆಳಗಡೆ ನೀಡಲಾಗಿದೆ
ಪೆಂಡಿಂಗ್ ಇರುವ ಅಕ್ಕಿ ಹಣ ಪಡೆಯಲು ಏನು ಮಾಡಬೇಕು (anna bhagya dbt status).?
ಸ್ನೇಹಿತರೆ ನಿಮಗೆ ಇನ್ನೂ ಅನ್ನಭಾಗ್ಯ ಯೋಜನೆಯ 5 ಅಥವಾ 6 ಕಂತಿನ ಹಣ ಜಮಾ ಆಗುವುದು ಬಾಕಿ ಇದೆಯಾ ಹಾಗಾದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ekyc ಹಾಗೂ ಆಧಾರ್ ಕಾರ್ಡ್ ಜೋಡಣೆ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರ ekyc ಮಾಡಿಸಬೇಕು ಅಂದರೆ ಮಾತ್ರ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಬರುತ್ತೆ
ಎಲ್ಲಾ ಸರಿಯಾಗಿದ್ದು ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗುತ್ತಿಲ್ಲವೇ ಹಾಗಾದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಜಮಾ ಆಗುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು.! ಇದೀಗ ಇಲ್ಲಿವರೆಗೂ ಈ ಯೋಜನೆ ಅಡಿಯಲ್ಲಿ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ ಎಂಬುದು ತಿಳಿಯೋಣ
ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ (anna bhagya dbt status)..?
- ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಅಕ್ಕಿ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ನೋಡೋಣ.!
- ನೀವು ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ ಅಪ್ಲಿಕೇಶನ್ ಗೆ ಭೇಟಿ ನೀಡಿ ಕರ್ನಾಟಕ DBT ಸ್ಟೇಟಸ್ ಎಂಬ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
- ನಂತರ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮುಖ್ಯಸ್ಥರ ಆಧಾರ್ ನಂಬರ್ ಎಂಟರ್ ಮಾಡಿ ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ನೀವು ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ಅಲ್ಲಿ ಪೇಮೆಂಟ್ ಸ್ಟೇಟಸ್ (payment status) ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಇಲ್ಲಿವರೆಗೂ ವಿವಿಧ ಗೋರ್ಮೆಂಟ್ ಯೋಜನೆಗಳ ಹಣ ಜಮಾ ಆಗುವುದರ ಬಗ್ಗೆ ಮಾಹಿತಿ ಸಿಗುತ್ತದೆ ಅದರಲ್ಲಿ ನೀವು ಅನ್ನಭಾಗ್ಯ ಯೋಜನೆ (Annabhagya Scheme) ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ನಿಮಗೆ ಅಲ್ಲಿ ಇಲ್ಲಿವರೆಗೂ ಎಷ್ಟು ಕಂತಿನ ಅಕ್ಕಿ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ನೋಡಲು ಸಿಗುತ್ತದೆ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
1 thought on “anna bhagya dbt status: ಅನ್ನಭಾಗ್ಯ ಯೋಜನೆ 2 ತಿಂಗಳ ಆಕ್ಕಿ ಹಣ ಬಿಡುಗಡೆ.! ಈ ರೀತಿ ಸ್ಟೇಟಸ್ ಚೆಕ್ ಮಾಡಿ”