PMAY Apply online: ಪ್ರಧಾನ ಮಂತ್ರಿ ಆವಾಸ್ ಯೋಜನೆ 2025 ರ ಅರ್ಜಿ ಪ್ರಾರಂಭ.! ಉಚಿತ ಮನೆ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2025 ಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಬಡ ವರ್ಗದ ಜನರಿಗೆ ಹಾಗೂ ಮನೆ ಇಲ್ಲದ ಕುಟುಂಬಗಳಿಗೆ ಶೇರ್ ಮಾಡಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY Apply online)..?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ ಮನೆ ಕಟ್ಟಿಸುವುದು ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ನೀಡುವುದು ಹಾಗೂ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 40 ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು

ಹೌದು ಸ್ನೇಹಿತರೆ ನಿಮಗೆ ವಾಸ ಮಾಡಲು ಮನೆ ಇಲ್ಲವಾ ಹಾಗೂ ಬಾಡಿಗೆ ಮನೆಯಲ್ಲಿ ನೀವು ವಾಸ ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಇದು ಸುವರ್ಣ ಅವಕಾಶ ಏಕೆಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇನ್ನು ಐದು ವರ್ಷಗಳ ಅವಧಿಯಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡಲಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಉಪಯೋಗಗಳು (PMAY Apply online).?
ನಗರ ಪಟ್ಟಿ:- ನಗರ ಪ್ರದೇಶದ ಜನರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿ ಎಂದು ವಿಭಾಗ ಮಾಡಲಾಗಿದೆ ಮತ್ತು ಇದರಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಗರಿಷ್ಠ 260,000 ವರೆಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ
ಇದರ ಜೊತೆಗೆ ಈ ನಗರ ಪಟ್ಟಿ ಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಗರಿಷ್ಠ 40 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಮನೆ ಕಟ್ಟಿಸಿಕೊಳ್ಳಲು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಆರ್ಥಿಕ ನೆರವು ಅಥವಾ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಹಾಗಾಗಿ ಈ ಯೋಜನೆ ಪ್ರಮುಖ ಲಾಭ ಎಂದು ಹೇಳಬಹುದು
ಗ್ರಾಮೀಣ ಪಟ್ಟಿ:- ಹೌದು ಸ್ನೇಹಿತರೆ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಮತ್ತು ಬಡ ವರ್ಗದ ಜನರು ಹಾಗೂ ಹಿಂದುಳಿದ ವರ್ಗದ ಜನರು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ₹1,70,000/- ವರೆಗೆ ಆರ್ಥಿಕ ನೆರವು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಿ
ಹೌದು ಸ್ನೇಹಿತರೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಪರಾನುಭವಿಗಳಿಗೆ ₹1,70,000/- ವರೆಗೆ ಸಬ್ಸಿಡಿ ಸಿಗುತ್ತದೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಗರಿಷ್ಠ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸಾಲ ಪಡೆದುಕೊಳ್ಳಬಹುದು ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಬೇಗ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PMAY Apply online).?
- ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಭಾರತದ ಪ್ರಜೆಯಾಗಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯಾವುದೇ ಉಚಿತ ಮನೆ ಯೋಜನೆಯ ಲಾಭ ಪಡೆದಿರಬಾರದು
- ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ವಯೋಮಿತಿ ಹಾಗೂ ಗರಿಷ್ಠ 50 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶವಿದೆ
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದಲ್ಲಿ ಯಾವುದೇ ಸದಸ್ಯರು ಸರಕಾರಿ ನೌಕರಿ ಅಥವಾ ಉನ್ನತ ಸಂಬಳ ತರುವ ಯಾವುದೇ ಉದ್ಯೋಗ ಹೊಂದಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (PMAY Apply online).?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾನ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (PMAY Apply online).?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಸಿಕೊಳ್ಳಲು ಗರಿಷ್ಠ 260,000 ವರೆಗೆ ಸಬ್ಸಿಡಿ ಹಾಗೂ 40 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆಯಲು ಬಯಸುತ್ತಿದ್ದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನಿಮ್ಮ ಹತ್ತಿರದ ಯಾವುದೇ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಇತರೆ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪರೀಕ್ಷೆಯ ಸುದ್ದಿಗಳು ಮತ್ತು ಓದಿನ ತಯಾರಿ ಹೇಗೆ ಮಾಡುವುದು ಮುಂತಾದ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ