SSP Scholarship: SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ, ಕೊನೆಯ ದಿನಾಂಕ ಯಾವಾಗ ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ ನೀಡಿದೆ ಹೌದು ಸ್ನೇಹಿತರೆ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಶುಲ್ಕ ಹಾಗೂ ಮತ್ತು ಶುಲ್ಕ ಮರುಪಾವತಿ ಹಾಗೂ ವಿದ್ಯಾಶ್ರೀ ಸ್ಕಾಲರ್ಶಿಪ್ ಯೋಜನೆಯ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳಿಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಬೇಗ ಕೇಂದ್ರ ಸರ್ಕಾರದ ಈ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಪ್ರತಿ 3000 ಹಣ ಪಡೆಯಿರಿ ಇಲ್ಲಿದೆ ನೋಡಿ ಮಾಹಿತಿ
ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ (SSP Scholarship)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು SSP ಪೋರ್ಟಲ್ ಮೂಲಕ ವಿವಿಧ ವರ್ಗ ಹಾಗೂ ವಿವಿಧ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಬೇಕಾಗುವ ಖರ್ಚು ವೆಚ್ಚಗಳು ಹಾಗೂ ಅರ್ಜಿ ಶುಲ್ಕ ಮತ್ತು ವಸತಿ ಶುಲ್ಕ ಮುಂತಾದ ಖರ್ಚು ವೆಚ್ಚಗಳಿಗಾಗಿ ರಾಜ್ಯ ಸರ್ಕಾರ ಎಸ್ ಎಸ್ ಸಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುತ್ತಿದೆ

ಅದೇ ರೀತಿ ಇದೇ ವರ್ಷ ಅಂದರೆ 2024 ಮತ್ತು 25ನೇ ಸಾಲಿನ ವಿದ್ಯಾರ್ಥಿಗಳಿಗೆ ಅದರಲ್ಲೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಈ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳ ಅರ್ಜಿ ಶುಲ್ಕ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಪಡೆಯಲು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಪ್ರಸ್ತುತ ಯಾವ ವಿದ್ಯಾರ್ಥಿಗಳು (SSP Scholarship) ಅರ್ಜಿ ಸಲ್ಲಿಸಬಹುದು ..?
ಹೌದು ಸ್ನೇಹಿತರೆ ಪ್ರಸ್ತುತ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1 ವಿದ್ಯಾರ್ಥಿಗಳು ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 10ನೇ ತರಗತಿ ನಂತರದ ವಿದ್ಯಾಭ್ಯಾಸ ಮಾಡುತ್ತಿರಬೇಕು
ಯಾವ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು (SSP Scholarship).?
- ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅಥವಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಶೈಕ್ಷಣಿಕ ಶುಲ್ಕದ ಸಹಾಯವನ್ನು ಪಡೆದುಕೊಳ್ಳಬಹುದು
- ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಹಾಗೂ ಕಾಲೇಜು ಶುಲ್ಕದ ಮರುಪಾವತಿಗೆ ಸಹಾಯಧನ ಪಡೆದುಕೊಳ್ಳಬಹುದು
- ವಿದ್ಯಾಸಿರಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಉಚಿತ ಊಟ ಹಾಗೂ ವಸತಿ ಸಹಾಯಕ್ಕೆ ಆರ್ಥಿಕ ನೆರವು ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SSP Scholarship).?
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಓಬಿಸಿ ವಿದ್ಯಾರ್ಥಿಗಳಾಗಿದ್ದರೆ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು
- ಹಾಗೂ ಪ್ರವರ್ಗ 1 ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 10 ಲಕ್ಷ ರೂಪಾಯಿಗಿಂತ ಒಳಗಡೆ ಇರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 50% ಅಂಕ ಪಡೆದಿರಬೇಕು
- ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ವರ್ಗದ ವಿದ್ಯಾರ್ಥಿಗಳು ಹಾಗೂ ಕೆಟಗೇರಿ 1 ವರ್ಗದ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಕನಿಷ್ಠ 45% ಅಂಕ ಪಡೆದಿರಬೇಕು
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ ಯಾವಾಗ (SSP Scholarship).?
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದಿನಾಂಕ 15 ಅಕ್ಟೋಬರ್ 2025 ರ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು ಅಫೀಷಿಯಲ್ ವೆಬ್ಸೈಟ್ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ssp.postmatric.karnataka.gov.in
ಸ್ನೇಹಿತರೆ ಇದೇ ರೀತಿ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ